HomeKarnatakaBIG NEWS: ಜನರಿಗೆ ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಮೊದಲ ಕ್ಯಾಬಿನೆಟ್ ನಲ್ಲೇ ಯುವಕರಿಗೆ...

BIG NEWS: ಜನರಿಗೆ ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಮೊದಲ ಕ್ಯಾಬಿನೆಟ್ ನಲ್ಲೇ ಯುವಕರಿಗೆ ಮೋಸ ಮಾಡಿದೆ; ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಕೆ. ಎಸ್.ಈಶ್ವರಪ್ಪ, ಕಾಂಗ್ರೆಸ್ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ 5 ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಗ್ಯಾರಂಟಿ ಜಾರಿಯಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಮಾತು ಕೊಟ್ಟಂತೆ ಅಕ್ಕಿ ಕೊಡಲಾಗದೇ ಈಗ ಕೇಂದ್ರ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಮೊದಲನೇ ಕ್ಯಾಬಿನೆಟ್ ನಲ್ಲಿಯೇ ಯುವಕರಿಗೆ ಮೋಸ ಮಾಡಿದ್ದಾರೆ. ರಾಜ್ಯದ ಒಬ್ಬ ಯುವಕನಿಗೂ ಹಣ ಕೊಟ್ಟಿಲ್ಲ. ಮನೆ ಯಜಮಾನಿ ಖಾತೆಗೆ ಇನ್ನೂ ಹಣ ಹಾಕಿಲ್ಲ ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆ ಎಂದು ಹೇಳಿ ಬಡವರಿಗೆ ಟೋಪಿ ಹಾಕಿ ಸರ್ಕಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular