ಕೋಲಾರ : ವೇಶ್ಯಾವಾಟಿಕೆ ನಡೆಸುತ್ತಿದ್ದ ರೆಸಾರ್ಟ್ ಮೇಲೆ ದಾಳಿ ನಡೆಸಿದ ಪೊಲೀಸರು 14 ಮಂದಿ ಆರೋಪಿಗಳನ್ನು ಬಂಧಿಸಿ, 6 ಮಹಿಳೆಯರನ್ನು ರಕ್ಷಣೆ ಮಾಡಿದ ಘಟನೆ ಕೊಲಾರ ಜಿಲ್ಲೆ ಮುಳುಬಾಗಿಲಿನ ರೆಸಾರ್ಟ್ ನಲ್ಲಿ ನಡೆದಿದೆ.
ಕಳೆದ ಹಲವು ದಿನಗಳಿಂದ ರೆಸಾರ್ಟ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಎಂಬ ಮಾಹಿತಿ ಪೊಲೀಸರಿಗೆ ಬಂದಿತ್ತು. ಅಂತೆಯೇ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬಯಲಿಗೆ ಬಂದಿದೆ.
ದಾಳಿ ನಡೆಸಿದ ಕೋಲಾರ ಪೊಲೀಸರು 14 ಮಂದಿ ಆರೋಪಿಗಳನ್ನು ಬಂಧಿಸಿ, 6 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಇನ್ಸ್ಪೆಕ್ಟರ್ ಬೈರರಾಮಪ್ಪ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಈ ಸಂಬಂಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.