ಹುಬ್ಬಳ್ಳಿ: ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ನಮ್ಮ ಅಕ್ಕಿ ಬಿಟ್ಟು ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಕೊಡುವ ಬಗ್ಗೆ ಮೊದಲು ಸ್ಪಷ್ಟ ಪಡಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಚುನಾವಣೆಗೂ ಮೊದಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ರಾಜ್ಯ ಸರ್ಕಾರ ಮೇ 2ರಂದು ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ 5ಕೆಜಿ ಅಕ್ಕಿ ಕೊಡುತ್ತಿದೆ. ನಾವು ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಲಿ ಎಂದರು.
ನಿಮಗೆ ಅಕ್ಕಿ ಬೇಕಾದರೆ ಕೇಂದ್ರ ಸರ್ಕಾರದ ಬಳಿ ಕೇಳಬೇಕು. ನೈಸರ್ಗಿಕ ವಿಕೋಪ ಬಂದಾಗ ನಮಗೆ ಅಕ್ಕಿ ಸ್ಟಾಕ್ ಅವಶ್ಯಕತೆ ಇದೆ. ಕಾಂಗ್ರೆಸ್ ಸರ್ಕಾರ ಮೊದಲು ಸುಳ್ಳು ಹೇಳುವುದನ್ನು ಬಂದ್ ಮಾಡಲಿ ಎಂದು ಹೇಳಿದರು.