HomeKarnatakaBIG NEWS: ಬಿ.ಎಸ್.ವೈ. ಪ್ರತಿಭಟನೆ ರಾಜಕೀಯ ಗಿಮಿಕ್; ಮಾಜಿ ಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BIG NEWS: ಬಿ.ಎಸ್.ವೈ. ಪ್ರತಿಭಟನೆ ರಾಜಕೀಯ ಗಿಮಿಕ್; ಮಾಜಿ ಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ. 10 ಕೆಜಿ ಅಕ್ಕಿಯಲ್ಲಿ ಒಂದು ಗ್ರಾಂ ಕಡಿಮೆ ಆದರೂ ಧರಣಿ ನಡೆಸುತ್ತೇವೆ ಎಂದು ಹೇಳಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ಅವರ ಪ್ರತಿಭಟನೆ ರಾಜಕೀಯ ಗಿಮಿಕ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಮಹದೇವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪನವರಿಗೆ ಧರಣಿ ಮಾಡುವ ಯಾವುದೆ ನೈತಿಕತೆ ಇಲ್ಲ, ಕಾರಣ ಯಡಿಯೂರಪ್ಪ ತಮ್ಮ ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸಿದ್ರಾ ? ಇಲ್ಲ, ಯಡಿಯೂರಪ್ಪ ಸರ್ಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸಿದ್ರಾ ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ನಮ್ಮ ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಸಿದ್ಧರಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ. ಈ ಕುರಿತು ನಾವು ಈಗಾಗಲೇ ತೀರ್ಮಾನ ಮಾಡಿದ್ದೇವೆ. ಹೀಗಿರುವಾಗ ಯಡಿಯೂರಪ್ಪ ಪ್ರತಿಭಟನೆ ಮಾಡುವುದಾಗಿ ಹೇಳುತ್ತಿರುವುದು ರಾಜಕೀಯ ಗಿಮಿಕ್ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular