ಬೆಂಗಳೂರು : ಸಿಇಟಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ.
ಜೂನ್ 27 ರಿಂದ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ನಡೆಯಲಿರುವ ದಾಖಲಾತಿ ಪರಿಶೀಲನೆಗೆ ಸಂಬಂಧ ಬೆಂಗಳೂರು ನಗರ ಅಭ್ಯರ್ಥಿಗಳು ಮಾತ್ರ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕೆಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಬೆಂಗಳೂರು ನಗರ ಅಭ್ಯರ್ಥಿಗಳು ಮಾತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, 18ನೇ ಅಡ್ಡ ರಸ್ತೆ, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಬೆಂಗಳೂರು ಕಛೇರಿಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ದಾಖಲಾತಿ ಪರಿಶೀಲನೆಗೆ ಹಾಜರಾಗುವುದು, ಬೆಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯ ಅಧಿಕಾರಿ / ಸಿಬ್ಬಂದಿಯವರು ಕೆಇಎ ಆವರಣದಲ್ಲಿ ದಿನಾಂಕ. 27.06.2023 ರಿಂದ 15.07.2023ರವರೆಗೆ ದಾಖಲಾತಿ ಪರಿಶೀಲನೆಯನ್ನು ಕಾರ್ಯವನ್ನು ನಡೆಸುತ್ತಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಯುಜಿ ಸಿಇಟಿ-2023ರ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ರ್ಯಾಂಕ್ ಪಡೆದ ಅಭ್ಯರ್ಥಿಗಳಿಗೆ, ಆನ್ಲೈನ್ ಮೂಲಕ ದಾಖಲಾತಿ ಪರಿಶೀಲನೆಗೆ ದಿನಾಂಕವನ್ನು ಪ್ರಕಟಿಸಿದೆ.ಅರ್ಹತಾ ಕಂಡಿಕೆ ‘ಎ’ ಷರತ್ತುಗಳನ್ನು ಪೂರೈಸುವ ಎಲ್ಲಾ ಅಭ್ಯರ್ಥಿಗಳು ಸೀಟು ಹಂಚಿಕೆಗೆ ಅರ್ಹತೆ ಪಡೆಯುವುದಕ್ಕಾಗಿ, ಅಭ್ಯರ್ಥಿಗಳು ವ್ಯಾಸಂಗ ಮಾಡಿದ ಶಾಲೆಯ ವ್ಯಾಪ್ತಿಯಲ್ಲಿರುವ / ಕಾಲೇಜುಗಳಿಗೆ ನಿಗದಿಯಾಗಿರುವ ಸಂಬಂಧಿಸಿದ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿಗೆ ಇಂಜಿನಿಯರಿಂಗ್ ರ್ಯಾಂಕ್ ಆಧಾರದ ಮೇಲೆ ನಿಗದಿಪಡಿಸಿದ ದಿನಾಂಕಗಳಂದು ದಾಖಲಾತಿ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಿದೆ.
ವಿವಿಧ ವ್ಯಾಸಂಗ ಪ್ರಮಾಣ ಪತ್ರ ಪರಿಶೀಲನೆ, ಆನ್ಲೈನ್ ದಾಖಲಾತಿ ಪರಿಶೀಲನೆಯ ಬಗ್ಗೆ ಪ್ರಾಧಿಕಾರದ ವೆಬ್ಸೈಟಿನಲ್ಲಿ ಪೋಸ್ಟ್ ಮಾಡಿರುವ ಸೂಚನೆಗಳನ್ನು ಮತ್ತು ಮಾರ್ಗದರ್ಶನಗಳನ್ನು ಅಭ್ಯರ್ಥಿಗಳು ಮತ್ತು ಪೋಷಕರು ಓದಿಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ದಿನಾಂಕ 27-06-2023 ರಿಂದ 15-07-2023 ರವರೆಗೆ ಆನ್ಲೈನ್ ಮೂಲಕ ದಾಖಲಾತಿ ಪರಿಶೀಲನೆ ಮಾಡಲು ಕೆಇಎ ದಿನಾಂಕವನ್ನು ನಿಗದಿಪಡಿಸಿದೆ.