ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರಿಗೆ ಆರು ತಿಂಗಳು ಜೈಲು, 65 ಲಕ್ಷ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.
ತಮ್ಮ ಮಗಳಿಗೆ ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ 65 ಲಕ್ಷ ರೂ. ಪಡೆದುಕೊಂಡು ಮಾಜಿ ಶಾಸಕ ನರಸಿಂಹ ಸ್ವಾಮಿ ವಂಚಿಸಿದ್ದಾರೆ. ಹಣ ವಾಪಸ್ ಕೊಟ್ಟಿಲ್ಲ. ಚೆಕ್ ಗಳು ಅಮಾನ್ಯಗೊಂಡಿದೆ ಎಂದು ಪ್ರಕಾಶ್ ಕುಮಾರ್ ದೂರು ದಾಖಲಿಸಿದ್ದರು.
ನರಸಿಂಹಸ್ವಾಮಿ ವಿರುದ್ಧದ ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರು ತಿಂಗಳು ಜೈಲು ಮತ್ತು 65 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ. ನರಸಿಂಹಸ್ವಾಮಿ ಪರ ವಕೀಲರು ಮೇಲ್ಮನವಿ ಸಲ್ಲಿಸುವ ಕುರಿತ ಮನವಿ ಹಾಗೂ ಜಾಮೀನು ಕೋರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದರಿಂದ ಬಂಧನ ಭೀತಿಯಿಂದ ನರಸಿಂಹಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.