ನವದೆಹಲಿ : ಬೆಂಗಳೂರು -ಧಾರವಾಡ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸೇರಿದಂತೆ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದ್ದಾರೆ. ಏಕಕಾಲದಲ್ಲಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಚಾಲನೆ ಸಿಕ್ಕಿದೆ.
ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ 10.30 ಕ್ಕೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ವರ್ಚುವಲ್ ಮೂಲಕ ಐದು ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಧಾರವಾಡ -ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಬೆಳಗ್ಗೆ ಧಾರವಾಡದಿಂದ ಹೊರಟು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ದಾವಣಗೆರೆಗೆ ಆಗಮಿಸಲಿದೆ. ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭೋಪಾಲ್ –ಇಂದೋರ್, ಭೋಪಾಲ್ –ಜಬಲ್ಪುರ, ರಾಂಚಿ –ಪಾಟ್ನಾ, ಮಡಗಾಂವ್ – ಮುಂಬೈ ಮಾರ್ಗದ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಮೋದಿ ಚಾಲನೆ ನೀಡಿದ್ದಾರೆ.ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.
.