ಪವರ್ ಸ್ಟಾರ್ ಪವನ್ ಕಲ್ಯಾಣ್ ಹಾಗೂ ಸಾಯಿ ಧರ್ಮತೇಜ್ ಅಭಿನಯದ ಬಹುನಿರೀಕ್ಷಿತ ‘ಬ್ರೋ’ ಚಿತ್ರದ ಟೀಸರ್ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.
ಜುಲೈ 28ರಂದು ತೆರೆ ಕಾಣಲಿರುವ ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಪವನ್ ಕಲ್ಯಾಣ್ ಹಾಗೂ ಸಾಯಿ ಧರ್ಮತೇಜ್ ಅವರನ್ನು ಒಂದೇ ತೆರೆ ಮೇಲೆ ವೀಕ್ಷಿಸಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಹಾಗೂ ಜಿ ಸ್ಟುಡಿಯೋಸ್ ಬ್ಯಾನರ್ ಅಡಿ ವಿಶ್ವ ಪ್ರಸಾದ್ ಹಾಗೂ ವಿವೇಕ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ. ತಮಿಳಿನ ‘ವಿನೋದಯ ಸೀತಾರಾಮ್’ ಸಿನಿಮಾದ ರಿಮೇಕ್ ಇದಾಗಿದೆ.