ಬೆಂಗಳೂರು : ರಾಜ್ಯದ 31 ಜಿಲ್ಲೆಗಳಲ್ಲೂ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೂಡ ನಮ್ಮ ಸರ್ಕಾರವೇ ಕೆಂಪೇಗೌಡ ಜಯಂತಿ ಆರಂಭಿಸಿದ್ದು, ಸರ್ಕಾರದಿಂದ ಕೆಂಪೇಗೌಡ ಜಯಂತಿ ಆಚರಿಸಲು ನಾವು ಆದೇಶ ನೀಡಿದ್ದೆವು. ರಾಜ್ಯದ 31 ಜಿಲ್ಲೆಗಳಲ್ಲೂ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಮ್ಮ ಸರ್ಕಾರವೇ ಕೆಂಪೇಗೌಡ ಜಯಂತಿ ಆರಂಭಿಸಿದ್ದು, ಅಲ್ಲದೇ ಕೆಂಪೇಗೌಡ ಪ್ರಾಧಿಕಾರವನ್ನು ರಚನೆ ಮಾಡಿದ್ದು ಕೂಡ ನಾವೇ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂನ್ 27ರಂದು ವೈಭವಯುತವಾಗಿ ಆಚರಿಸಲು ರಾಜ್ಯ ಒಕ್ಕಲಿಗರ ಸಂಘ ನಿರ್ಧರಿಸಿದೆ.