HomeKarnatakaBIG NEWS : ಬಿಜೆಪಿ ಸರ್ಕಾರದ 6 ಹಗರಣಗಳ ತನಿಖೆಗೆ ಶೀಘ್ರವೇ ಆದೇಶ : ಸಿಎಂ...

BIG NEWS : ಬಿಜೆಪಿ ಸರ್ಕಾರದ 6 ಹಗರಣಗಳ ತನಿಖೆಗೆ ಶೀಘ್ರವೇ ಆದೇಶ : ಸಿಎಂ ಸಿದ್ದರಾಮಯ್ಯ ಸುಳಿವು

ಹಾಸನ : ಬಿಜೆಪಿ ಸರ್ಕಾರದ ಅವಧಿಯಲ್ಲಿನ ಆರು ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ಶೀಘ್ರವೇ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಹಾಸನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ನಂತರ ಮಾತನಾಡಿದರು.

40% ಕಮಿಷನ್ ಆರೋಪ , ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, ಬಿಟ್ ಕಾಯಿನ್ ಅವ್ಯವಹಾರ, ಚಾಮರಾಜನಗರದ ಆಕ್ಸಿಜನ್ ದುರಂತದ ಬಗ್ಗೆ ಕೂಡ ಮರು ತನಿಖೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶೀಘ್ರದಲ್ಲಿಯೇ ಆರು ಹಗರಣಗಳನ್ನು ಎಸ್ಐಟಿಗೆ ನೀಡಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ, ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ ಯೋಜನೆ ಗೋಲ್ಮಾಲ್, PSI ನೇಮಕಾತಿ ಹಗರಣ, ಕೋವಿಡ್ ಸಲಕರಣೆ ಖರೀದಿ ಹಗರಣ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ, BDA, BBMP ಅಕ್ರಮಗಳು ಸೇರಿ ಶೀಘ್ರದಲ್ಲಿಯೇ ಆರು ಹಗರಣಗಳನ್ನು ಎಸ್ಐಟಿಗೆ ನೀಡಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular