ಬೆಂಗಳೂರು : ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಿಟ್ ಕಾಯಿನ್ ಪ್ರಕರಣವನ್ನು ಮರು ಪರಿಶೀಲನೆ ಮಾಡುತ್ತೇವೆ.ಈ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತೇವೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸುದ್ದಿಯಾಗಿದ್ದ ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಸಕ್ತಿ ತೋರಿದೆ. ಬೆಂಗಳೂರಿನ ಕೆಂಪೇಗೌಡ ನಗರ ಠಾಣೆಯಲ್ಲಿ 2020 ರಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ ಶ್ರೀ ಕೃಷ್ಣ ಆಲಿಯಾಸ್ ಶ್ರೀಕಿ (26) ಸಿಕ್ಕಿಬಿದ್ದಿದ್ದನು. ಈತ ಬಿಟ್ ಕಾಯಿನ್ ಜಾಲದ ಸಂಪೂರ್ಣ ಮಾಹಿತಿ ಬಿಚ್ಚಿಟ್ಟಿದ್ದನು. ಇದೀಗ ಬಿಟ್ ಕಾಯಿನ್ ಹಗರಣದ ಸಂಪೂರ್ಣ ತನಿಖೆಗೆ ನಿರ್ಧರಿಸಲಾಗಿದೆ.