CM Siddaramaiah : ಹಿರಿಯ ನಾಗರಿಕರಿಗೆ ಏನು ಕೊಡ್ತೀರಾ..? ಎಂದ ವ್ಯಕ್ತಿ : ಸುಮ್ಮನೆ ಕುತ್ಕೊಳಪ್ಪ ಎಂದ ಸಿಎಂ ಸಿದ್ದರಾಮಯ್ಯ

ಹಾಸನ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ತಿಂಗಳಿಗೆ 2000 ರೂ ನೀಡುವ ಯೋಜನೆ ನೀಡಿದ್ದೀರಿ..ಆದರೆ ಹಿರಿಯ ನಾಗರಿಕರಿಗೆ ಏನು ಕೊಡ್ತೀರಾ ಎಂದು ಸಿಎಂ ಸಿದ್ದರಾಮಯ್ಯರನ್ನು ವ್ಯಕ್ತಿಯೊಬ್ಬ ಜೋರಾಗಿ ಕೇಳಿದ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದಲ್ಲಿ ಕೆಂಪೇಗೌಡ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಹಿರಿಯ ನಾಗರಿಕರಿಗೆ ಏನು ಕೊಡ್ತೀರಾ ಎಂದು ವ್ಯಕ್ತಿ ಜೋರಾಗಿ ಕೇಳಿದ್ದಾನೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಏಯ್..ಸುಮ್ಮನೆ ಕುತ್ಕೊಳಪ್ಪ ಎಂದು ಗದರಿಸಿ ಕೂರಿಸಿದ್ದಾರೆ. ಇದೇ ವೇಳೆ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಅದಕ್ಕೆ ಆಯ್ತು ಶಿವಲಿಂಗೇಗೌಡರನ್ನು ಮಂತ್ರಿ ಮಾಡೋಣ ಎಂದು ಸಿಎಂ ಹೇಳಿದ್ದಾರೆ. ಸಿಎಂ ಮಾತಿಗೆ ಬೆಂಬಲಿಗರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳ ತನಿಖೆ ಮಾಡಲಾಗುತ್ತದೆ ಎಂದರು. ನಾವು ಕೇಂದ್ರದಿಂದ ಫ್ರೀ ಆಗಿ ಅಕ್ಕಿ ಕೇಳುತ್ತಿಲ್ಲ. ಹಣ ಕೊಡುತ್ತೇವೆ ಎಂದರೂ ಅಕ್ಕಿ ಕೊಡುತ್ತಿಲ್ಲ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read