ಹಾಸನ : ‘ಕೆಂಪೇಗೌಡರ ಜಯಂತಿ’ ಮಾಡಿದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತದೆ ಎಂದು ಆದಿಚುಂಚನಗಿರಿ ಮಠದ ಸ್ವಾಮೀಜಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ನಂತರ ಮಾತನಾಡಿದರು.
ಅಂದು ಸಿದ್ದರಾಮಯ್ಯ ಅವರು ಸಿಎಂ ಆಗಿ ಕೆಂಪೇಗೌಡ ಜಯಂತಿ ಮಾಡಿದ್ದರು. ಈ ಕಾರ್ಯಕ್ರಮ ರಾಜ್ಯದ ಬೇರೆ ಕಡೆ ಕೂಡ ದೊಡ್ಡ ರೀತಿಯಲ್ಲಿ ಆಗುವಂತೆ ಮಾಡಿದ್ದು ಕೂಡ ಸಿದ್ದರಾಮಯ್ಯನವರೇ ಎಂದು ಹೇಳಿದರು. ಕೆಂಪೇಗೌಡರ ಜಯಂತಿ’ ಮಾಡಿದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸಿದ್ದರಾಮಯ್ಯರನ್ನು ಕೊಂಡಾಡಿದರು.
ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ಕೆಂಪೇಗೌಡರು ದೂರ ದೃಷ್ಟಿಯುಳ್ಳ ನಾಡಪ್ರಭು. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ನಡೆಯುತ್ತಿದ್ದು, ಇದು 514 ನೇ ಜಯಂತಿಯಾಗಿದೆ. ಬೆಂಗಳೂರು ಇಂದು ಭಾರಿ ದೊಟ್ಟ ಮಟ್ಟದಲ್ಲಿ ಅಭಿವೃದ್ದಿ ಆಗಿದೆ ಎಂದರೆ ಅದಕ್ಕೆ ಕೆಂಪೇಗೌಡರೇ ಕಾರಣ ಎಂದರು.
ಮೂವರು ಸಾಧಕರಿಗೆ ‘ಕೆಂಪೇಗೌಡ ಪ್ರಶಸ್ತಿ’ ಪ್ರಧಾನ ಮಾಡಿದ ಡಿಸಿಎಂ ಡಿಕೆಶಿ
ಬೆಂಗಳೂರು : ಕೆಂಪೇಗೌಡ ಜಯಂತಿಯಂದು ( ಜೂ.27) ಇಂದು ಮೂವರು ಸಾಧಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಮಾಡಿದರು.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ದೇಶದ ಪ್ರತಿಷ್ಠಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜರೋಧ ಸಂಸ್ಥೆಯ ಸಂಸ್ಥಾಪಕ ನಿತಿನ್ ಕಾಮತ್, ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.