alex Certify ಪಿಎಸ್ಐ ಅಕ್ರಮ ಆರೋಪಿತರ ಹೊರತುಪಡಿಸಿ ಉಳಿದ ಅಭ್ಯರ್ಥಿಗಳ ನೇಮಕಾತಿಗೆ ಕಿರು ಪರೀಕ್ಷೆ ಸಾಧ್ಯತೆ: ಸರ್ಕಾರಕ್ಕೆ ಹೈಕೋರ್ಟ್ ಗಡುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ಅಕ್ರಮ ಆರೋಪಿತರ ಹೊರತುಪಡಿಸಿ ಉಳಿದ ಅಭ್ಯರ್ಥಿಗಳ ನೇಮಕಾತಿಗೆ ಕಿರು ಪರೀಕ್ಷೆ ಸಾಧ್ಯತೆ: ಸರ್ಕಾರಕ್ಕೆ ಹೈಕೋರ್ಟ್ ಗಡುವು

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗೆ ಮಾತ್ರ ಮತ್ತೆ ಕಿರುಪರೀಕ್ಷೆ ನಡೆಸುವ ಸಾಧ್ಯತೆಯ ಕುರಿತು ತೀರ್ಮಾನಿಸಲು ಸರ್ಕಾರಕ್ಕೆ ಜುಲೈ 5ರ ವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ.

ನೇಮಕಾತಿಯಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ ಲಿಖಿತ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಹೊರಡಿಸಿದ ಆದೇಶ ರದ್ದುಪಡಿಸಬೇಕು. ಕಳಂಕಿತ ಅಭ್ಯರ್ಥಿಗಳು ಮತ್ತು ಕಳಂಕ ರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ನೇಮಕ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ನೂರಕ್ಕೂ ಹೆಚ್ಚು ಅಧಿಕ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಮೂರ್ತಿ ಜಿ. ನರೇಂದರ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ ವಿಚಾರಣೆ ನಡೆಸಿದೆ.

ಜೂನ್ 15 ರಂದು ಹೈಕೋರ್ಟ್ ವಿಚಾರಣೆ ನಡೆಸಿ 545 ಪಿಎಸ್ಐ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಆರೋಪ ಪಟ್ಟಿಯಲ್ಲಿ ಹೆಸರಿರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ಪರೀಕ್ಷೆ ನಡೆಸಬಹುದೇ? ಆ ಪರೀಕ್ಷೆ ಫಲಿತಾಂಶ ಆಧಾರದಲ್ಲಿ ಹುದ್ದೆಗೆ ಪರಿಗಣಿಸಲು ಸಾಧ್ಯವೇ ಎಂದು ಸರ್ಕಾರದಿಂದ ಮಾಹಿತಿ ಪಡೆದು ಕೋರ್ಟ್ ಗೆ ತಿಳಿಸುವಂತೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿತ್ತು. ಈ ಕುರಿತು ಸರ್ಕಾರ ಪರಿಶೀಲಿಸುತ್ತಿದ್ದು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಅಡ್ವೊಕೇಟ್ ಜನರಲ್ ಮನವಿ ಮಾಡಿದ್ದು, ಇದನ್ನು ಪರಿಗಣಿಸಿದ ಪೀಠ ಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಜುಲೈ 5 ಕ್ಕೆ ಮುಂದೂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...