ಬಾಗಲಕೋಟೆ : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವು ಕಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿದ್ದಾರೆ.
ಬಾಗಲಕೋಟೆ ಕೃಷಿ ನಿರ್ದೇಶಕಿ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಕೃಷಿ ನಿರ್ದೇಶಕಿ ಮನೆಯಲ್ಲಿ ಲಕ್ಷಾಂತರ ರೂ ಹಣ, ಆಮೆ ಪತ್ತೆಯಾಗಿದೆ. ವಿದ್ಯಾಗಿರಿಯ ಅಕ್ಕಿಮರಡಿ ಲೇಔಟ್ ನಲ್ಲಿರುವ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಮನೆ ಮೇಲೆ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅವರ ನಿವಾಸದಲ್ಲಿ ಎರಡು ಸಾಕು ಆಮೆಗಳು ಪತ್ತೆಯಾಗಿದ್ದು, ಮನೆಯಲ್ಲಿ ಅದೃಷ್ಟ ಖುಲಾಯಿಸಲು ಆಮೆಗಳನ್ನು ಸಾಕಲಾಗಿತ್ತು ಎನ್ನಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಮನೆ ಬಾಗಿಲು ಬಡಿದಿದ್ದಾರೆ. ಬೆಳಗಿನ ಜಾವವೇ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಸೇರಿ ಸಂಬಂಧಿತ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.ಬೆಂಗಳೂರಿನ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಆರ್ ಪುರಂ ತಹಸಿಲ್ದಾರ್ ಅಜಿತ್ ರೈ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಜಿತ್ ರೈ ಅವರ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಖಲೆ ಪರಿಶೀಲನೆ ನಡೆಸಲಾಗಿದೆ. ಮನೆಯಲ್ಲಿ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.