BIG NEWS : ರಾಜ್ಯ ಸರ್ಕಾರದ ವಿರುದ್ಧ ‘ವರ್ಗಾವಣೆ ದಂಧೆ’ ಬಾಂಬ್ ಸಿಡಿಸಿದ H.D ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿ ಸರಣಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.

ಪಂಚಗ್ಯಾರಂಟಿಗಳ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ Corruption of Karnataka..? ಎಂದು ವಾಗ್ಧಾಳಿ ನಡೆಸಿದ್ದಾರೆ.

4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್ ಕಂಟ್ರೋಲ್ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ. ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಹೆಚ್ಡಿಕೆ ಸರಣಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read