BIG NEWS: ಇವರ ತಲೆಯಲ್ಲಿ ಸಗಣಿ ಇದೆಯೋ ಏನೋ ಅರ್ಥ ಆಗ್ತಿಲ್ಲ; ಬಿಜೆಪಿ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಹಂತ ಹಂತವಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡ್ತಿದೆ. ಗ್ಯಾರಂಟಿಗಳ ಬಗ್ಗೆ ಬಿಜೆಪಿ ನಾಯಕರು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರು 2 ಕೋಟಿ ಉದ್ಯೋಗ ಕೊಡುತ್ತೇನೆ ಅಂದ್ರು, ಕೊಟ್ರಾ‌ ? ಬಿಜೆಪಿ ನಾಯಕರು ತಾವು ಕೊಟ್ಟ ಭರವಸೆ ಈಡೇರಿಸಿಲ್ಲ. ಇವರ ತಲೆಯಲ್ಲಿ ಸಗಣಿ ಇದಿಯೋ ಏನೋ ಅರ್ಥ ಆಗ್ತಿಲ್ಲ. ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಹಗರಣಗಳ ಬಗ್ಗೆ ತನಿಖೆಗೆ ನಾನು ಒತ್ತಾಯಿಸುತ್ತೇನೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ 70 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read