HomeKarnatakaBREAKING NEWS : 5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆಯಲ್ಲಿ ನಿರ್ಧಾರ...

BREAKING NEWS : 5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆಯಲ್ಲಿ ನಿರ್ಧಾರ : ಸಚಿವ ಮುನಿಯಪ್ಪ

ಬೆಂಗಳೂರು : 5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ ಎಂದರು. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಸಚಿವರು ಹೇಳಿದರು. ಪಡಿತರ ಕಾರ್ಡ್ ದಾರರಿಗೆ ಮಾಸಿಕ ತಲಾ 170 ರೂ ನೀಡುತ್ತೇವೆ ಎಂದು ಹೇಳಿದರು.

ಗೃಹಲಕ್ಷ್ಮಿ’ ಯೋಜನೆಯ ಪ್ರತ್ಯೇಕ ಆಪ್ಗೆ ಕ್ಯಾಬಿನೆಟ್ ನಲ್ಲಿ ಗ್ರೀನ್ ಸಿಗ್ನಲ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು : ಮನೆ ಒಡತಿಯರಿಗೆ 2 ಸಾವಿರ ನೀಡುವ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ ಪ್ರತ್ಯೇಕ ಆಪ್ಗೆ ಕ್ಯಾಬಿನೆಟ್ ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಆಪ್ ಬಗ್ಗೆ ಚರ್ಚೆ ನಡೆದಿದ್ದು, ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತು ಸರ್ಕಾರದ ನಿರ್ಧಾರ ತೆಗೆದುಕೊಂಡಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಸಿದ್ದರಾಮಯ್ಯಗೆ ಆಪ್ ಬಗ್ಗೆ ವಿವರಣೆ ನೀಡಿದರು. ಸದ್ಯದಲ್ಲೇ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಯಾಗಲಿದೆ. ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು. ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು. ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಯೋಜನೆಗಾಗಿ ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗಿದೆ. ಈ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಲಾಗಿದ್ದು, ಇದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಕೊಡುವ ‘ಶಕ್ತಿ’ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು, ಪ್ರತಿನಿತ್ಯ ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular