ಬೆಂಗಳೂರು : 5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಸಚಿವ ಮುನಿಯಪ್ಪ ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ ಎಂದರು. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು. ಪಡಿತರ ಕಾರ್ಡ್ ದಾರರಿಗೆ ಮಾಸಿಕ ತಲಾ 170 ರೂ ನೀಡುತ್ತೇವೆ , ಅಕ್ಕಿ ಸಂಗ್ರಹ ಆಗುವವರೆಗೆ ಹಣ ನೀಡಲು ನಿರ್ಧರಿಸಲಾಗಿದೆ ಎಂದರು. ಇದಕ್ಕಾಗಿ 840 ಕೋಟಿ ಖರ್ಚು ಆಗಲಿದೆ ಎಂದರು.
ಗೃಹಲಕ್ಷ್ಮಿ’ ಯೋಜನೆಯ ಪ್ರತ್ಯೇಕ ಆಪ್ಗೆ ಕ್ಯಾಬಿನೆಟ್ ನಲ್ಲಿ ಗ್ರೀನ್ ಸಿಗ್ನಲ್
ಬೆಂಗಳೂರು : ಮನೆ ಒಡತಿಯರಿಗೆ 2 ಸಾವಿರ ನೀಡುವ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ ಪ್ರತ್ಯೇಕ ಆಪ್ಗೆ ಕ್ಯಾಬಿನೆಟ್ ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಆಪ್ ಬಗ್ಗೆ ಚರ್ಚೆ ನಡೆದಿದ್ದು, ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತು ಸರ್ಕಾರದ ನಿರ್ಧಾರ ತೆಗೆದುಕೊಂಡಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಸಿದ್ದರಾಮಯ್ಯಗೆ ಆಪ್ ಬಗ್ಗೆ ವಿವರಣೆ ನೀಡಿದರು. ಸದ್ಯದಲ್ಲೇ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಯಾಗಲಿದೆ. ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು. ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು. ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಯೋಜನೆಗಾಗಿ ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗಿದೆ. ಈ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಲಾಗಿದ್ದು, ಇದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಕೊಡುವ ‘ಶಕ್ತಿ’ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು, ಪ್ರತಿನಿತ್ಯ ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.