ಬೆಂಗಳೂರು : ಮುಂದಿನ ವರ್ಷ ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾವನ್ನು ಈ ವರ್ಷ ಮಾಡಲಾಗುವುದಿಲ್ಲ, ಮುಂದಿನ ವರ್ಷ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳ ಪೈಕಿ ಗೃಹಶಕ್ತಿಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇನ್ನೂ, ಗೃಹಜ್ಯೊತಿ, ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಶುರು ಆಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಈ ಬೆನ್ನಲ್ಲೇ ಕೊಟ್ಟ ಮಾತಿನಂತೆ ಸರ್ಕಾರ ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಮಾಡಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮನೆ ಎದುರು ಬುಧವಾರ ಬೆಳಗ್ಗೆಯಿಂದಲೇ ಮಹಿಳೆಯರು ಪ್ರತಿಭಟನೆಗೆ ಕುಳಿತಿದ್ದರು. ಸಂಪುಟ ಸಭೆ ಮುಗಿಸಿ ಮಹಿಳೆಯರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾಗೆ 2400 ಕೋಟಿ ರೂ ಬೇಕಾಗುತ್ತದೆ, ಅದನ್ನು ಈ ವರ್ಷ ಮಾಡುವುದಕ್ಕೆ ಆಗಲ್ಲ. ಮಹಿಳೆಯರ ಜೊತೆ ಚರ್ಚಿಸಿ ಮುಂದಿನ ವರ್ಷ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.