HomeKarnatakaಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಸೂಚನೆ

ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಸೂಚನೆ

ಬೆಂಗಳೂರು: ಕಂದಾಯ ಇಲಾಖೆ ವತಿಯಿಂದ ವಿವಿಧ ಹಂತಗಳಲ್ಲಿ ಆಯೋಜಿಸುವ ಸಭೆ, ಸಮಾರಂಭಗಳಲ್ಲಿ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಸಿಬ್ಬಂದಿ ಅನುಸರಿಸಬೇಕೆಂದು ಸಚಿವ ಕೃಷ್ಣಭೈರೇಗೌಡ ಸೂಚನೆ ನೀಡಿದ್ದಾರೆ.

ಆಡಂಬರ ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ ಸಭೆ ಸಮಾರಂಭಗಳನ್ನು ಸರಳವಾಗಿ ನಡೆಸುವುದು. ಅನಗತ್ಯವಾಗಿ ಹಾರ, ನೆನಪಿನ ಕಾಣಿಕೆ ನೀಡದೆ ಅವಶ್ಯವಿದ್ದಲ್ಲಿ ತ್ರಿವರ್ಣ ಖಾದಿ ಹಾರ ಮಾತ್ರ ಬಳಸಬೇಕು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆ ಸಮಾರಂಭಗಳಲ್ಲಿ ಆತಿಥ್ಯಕ್ಕೆ ಔಪಚಾರಿಕತೆಗೆ ಸಮಯ ವ್ಯರ್ಥ ಮಾಡದೆ ಔಪಚಾರಿಕತೆಗೆ ಸಮಯ ಮಿತವಾಗಿರಿಸಿ ಸಭೆ ಸಮಾರಂಭದ ಮೂಲ ವಿಷಯಕ್ಕೆ ಹೆಚ್ಚಿನ ಸಮಯ ಒದಗಿಸಬೇಕು ಎಂದು ಹೇಳಲಾಗಿದೆ.

ಕುಡಿಯುವ ನೀರಿಗೆ ಬಳಸಿ ಬಿಸಾಡುವಂತಹ ಪ್ಲಾಸ್ಟಿಕ್ ಬಾಟಲ್, ಕಪ್ ಗಳನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಮರುಬಳಕೆ ಮಾಡುವ ಬಾಟಲ್, ಕಪ್ ಬಳಸಬೇಕು. ನೀರನ್ನು 20 ಲೀಟರ್ ಕ್ಯಾನ್ ಮೂಲಕ ಖರೀದಿಸಿ ಮರುಬಳಕೆ ಮಾಡುವ ಬಾಟಲ್ ಗಳಲ್ಲಿ ನೀಡಬೇಕು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular