HomeKarnatakaಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ: ಆಪ್ತನ ಸೋಲಿಗೆ ಕಾರಣರಾದ ಪಕ್ಷ ವಿರೋಧಿಗಳ...

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ: ಆಪ್ತನ ಸೋಲಿಗೆ ಕಾರಣರಾದ ಪಕ್ಷ ವಿರೋಧಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದು, ಪಕ್ಷ ವಿರೋಧಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆಯೂ ಸಿದ್ದರಾಮಯ್ಯ ಅವರ ಆಪ್ತ ಎಂ.ಕೆ. ಸೋಮಶೇಖರ್ ಸೋಲು ಕಂಡಿದ್ದಾರೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಆಪ್ತ ಎಂ.ಕೆ. ಸೋಮಶೇಖರ್ 7,000 ಮತಗಳ ಅಂತರದಿಂದ ಪರಭವಗೊಂಡಿದ್ದು, ಈ ಸೋಲಿನ ಬಗ್ಗೆ ಸಿದ್ದರಾಮಯ್ಯ ತಲೆಕೆಡಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ನವೀನ್ ಕುಮಾರ್, ಪ್ರದೀಪ್ ಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ತಮ್ಮ ಸೋಲಿಗೆ ಕಾರಣರಾದವರ ಬಗ್ಗೆ ಸೋಮಶೇಖರ್ ಸಿಎಂಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular