
ರೌಡಿಶೀಟರ್ ಸುಧೀರ್ ಎಂಬಾತನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲಿಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಾಡಹಗಲೇ ನಡೆದ ಭೀಕರ ಹತ್ಯೆಗೆ ಜನರು ಬೆಚ್ಚಿ ಬಿದ್ದಿದ್ದಾರೆ. ಸದ್ಯ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

