HomeKarnatakaಭಕ್ತರಿಗೆ ಉಚಿತ ಬಸ್ ವ್ಯವಸ್ಥೆ: ಆಷಾಢಮಾಸದ 2 ನೇ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ...

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ: ಆಷಾಢಮಾಸದ 2 ನೇ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗುವುದು.

ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಮೈಸೂರು ಜಿಲ್ಲಾಡಳಿತದಿಂದ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತ ಮಹಲ್ ಮೈದಾನದಿಂದ ಉಚಿತ ಬಸ್ ಗಳ ವ್ಯವಸ್ಥೆ ಇರಲಿದೆ. ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಅನ್ನದಾಸೋಹ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular