HomeKarnatakaBIG NEWS: ಸಾಲ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

BIG NEWS: ಸಾಲ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಯಾದಗಿರಿ: ಸಾಲ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್ ನ್ನು ಯಾದಗಿರಿ ಪೊಲೀಸರು ಮಹಾರಾಷ್ಟ್ರದ ಮುಂಬೈನಲ್ಲಿ ಬಂಧಿಸಿದ್ದಾರೆ.

ಜೂನ್ 11ರಂದು ಯಾದಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಂತೋಷ್, ಪಾಂಡು, ಮೆಹಬೂಬ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಯಾದಗಿರಿಯ ರಾಜೀವ್ ಗಾಂಧಿ ನಗರದಲ್ಲಿ ಹಾಗೂ ರಾಯಚೂರಿನ ಮಾನ್ವಿಯಲ್ಲಿ ಹಲವರು ಮೋಸದ ಗ್ಯಾಂಗ್ ನಿಂದ ಹಣ ಕಳೆದುಕೊಂಡಿದ್ದರು. ಮಾನ್ವಿಯ ರಂಗರಾವ್ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular