ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚನೆ ನೀಡಲಾಗಿದೆ. ಕಪ್ಪು ಬಟ್ಟೆ ಧರಿಸಿ ಬರದಂತೆ ವಿದ್ಯಾರ್ಥಿಗಳು, ಸಿಬ್ಬಂದಿಗೆ ವಿವಿ ಮಾರ್ಗಸೂಚಿ ಹೊರಡಿಸಿದೆ.
ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ತರಗತಿಗಳು ನಡೆಯುವುದಿಲ್ಲ ಜೂನ್ 30 ರಂದು ದೆಹಲಿ ವಿಶ್ವವಿದ್ಯಾಲಯದ(ಡಿಯು) ಶತಮಾನೋತ್ಸವ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಹಿಂದೂ ಕಾಲೇಜು, ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜು ಮತ್ತು ಜಾಕಿರ್ ಹುಸೇನ್ ದೆಹಲಿ ಕಾಲೇಜುಗಳು ಕಾರ್ಯಕ್ರಮದ ನೇರ ಪ್ರಸಾರಕ್ಕೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಾಜರಾಗುವುದನ್ನು ಕಡ್ಡಾಯಗೊಳಿಸಿವೆ.
ಹಿಂದೂ ಕಾಲೇಜು ಪ್ರಭಾರಿ ಶಿಕ್ಷಕಿ ಮೀನು ಶ್ರೀವಾಸ್ತವ ಅವರು, ಈವೆಂಟ್‌ನ ಲೈವ್ ಸ್ಟ್ರೀಮಿಂಗ್ ಸಮಯದಲ್ಲಿ ಎಲ್ಲಾ ವಿದ್ಯಾರ್ಥಿಗಳ ಉಪಸ್ಥಿತಿಯು ಕಡ್ಡಾಯವಾಗಿದೆ. ಐಡಿ ಕಾರ್ಡ್ ತರಬೇಕಿದೆ. ಕಪ್ಪು ಬಟ್ಟೆ ಧರಿಸಬಾರದು ಎಂದು ಹೇಳಿದ್ದಾರೆ.