![](https://kannadadunia.com/wp-content/uploads/2023/06/ef6680a4-7999-494e-b19d-225c016cfc2d-1.jpg)
ಪ್ರಧಾನಿ ನರೇಂದ್ರ ಮೋದಿಯವರು ಇಂದು ದೆಹಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಳ್ಳಲು ಅವರು ಮೆಟ್ರೋ ರೈಲಿನ ಮೂಲಕ ತೆರಳಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ನರೇಂದ್ರ ಮೋದಿಯವರು, ಮೆಟ್ರೋ ರೈಲಿನ ಮೂಲಕ ತೆರಳಲು ನಿರ್ಧರಿಸಿದ್ದು, ಅದರಂತೆ ನಿಲ್ದಾಣಕ್ಕೆ ಆಗಮಿಸಿದ್ದರು.
ಬಳಿಕ ಅವರು ವಿಶ್ವವಿದ್ಯಾಲಯದ ಬಳಿ ತೆರಳುವ ಮೆಟ್ರೋ ರೈಲನ್ನು ಏರಿದ್ದು, ಈ ಸಂದರ್ಭದಲ್ಲಿ ಸಹ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿದ್ದಾರೆ. ಡೆಲ್ಲಿ ಮೆಟ್ರೋ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಇದರ ವಿಡಿಯೋ ಹಂಚಿಕೊಂಡಿದೆ. ಈ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.