HomeKarnatakaBIG NEWS: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ಆರಂಭ

BIG NEWS: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ಆರಂಭ

ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಸ್ವಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ನಾಯಕರಿಗೆ ಬಿಸಿ ಮುಟ್ಟಿಸಲು ಬಿಜೆಪಿ ಸಭೆ ಆರಂಭವಾಗಿದೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ ನಡೆದಿದೆ. ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಗೋವಿಂದ ಕಾರಜೋಳ, ಎ.ಎಸ್. ಪಾಟೀಲ್ ನಡಹಳ್ಳಿ, ವೀರಣ್ಣ ಚರಂತಿಮಠ, ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ಶಾಸಕ ಯತ್ನಾಳ್ ಹಾಗೂ ಎಂ.ಪಿ. ರೇಣುಕಾಚಾರ್ಯ ಬಳಿ ಬಹಿರಂಗ ಹೇಳಿಕೆ ಬಗ್ಗೆ ಸ್ಪಷ್ಟನೆ ಕೇಳುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular