HomeIndiaGOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 44 ಜನರಲ್ಲಿ ಸೋಂಕು ಪತ್ತೆಯಾಗಿವೆ.

ಕೋವಿಡ್ ಸಕ್ರಿಯ ಪ್ರಕರಣಗಳು ತೀವ್ರವಾಗಿ ಕಡಿಮೆಯಾಗಿದ್ದು, 1533 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇನ್ನು ದೇಶದಲ್ಲಿ ಈವರೆಗೆ 531905 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44460750 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 296 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,38,461 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 37,451 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular