
ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ವಿಷ್ಣು ಮೃತಪಟ್ಟಿದ್ದು, ಚಿನ್ನ ಬೆಳ್ಳಿ ಕರಗಿಸುತ್ತಿರುವಾಗ ಸಿಲಿಂಡರ್ ಬ್ಲಾಸ್ಟ್ ಆಗಿದೆ.ಜ್ಯುವೆಲ್ಲರಿ ಅಂಗಡಿಗಳಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಕರಗಿಸಲು ಆಕ್ಸಿಜನ್ ಮತ್ತು ಎಲ್ ಪಿ ಜಿ ಬಳಸಲಾಗುತ್ತದೆ.
ಸ್ಪೋಟದ ಪರಿಣಾಮ ವಿಷ್ಣು ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

