ಬೆಂಗಳೂರು : ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ನೈಸ್ ರಸ್ತೆಯ ಟೋಲ್ ದರ ಶೇ 11ರಷ್ಟು ಹೆಚ್ಚಳವಾಗಿದೆ. ನಾಳೆಯಿಂದ ವಾಹನ ಸವಾರರಿಗೆ ನೈಸ್ ರಸ್ತೆಯ ಟೋಲ್ ದರದ ಬಿಸಿ ತಟ್ಟಲಿದೆ.
ಜುಲೈ 1 ರಿಂದ (ಶನಿವಾರ) ಪರಿಷ್ಕೃತ ಟೋಲ್ ದರಗಳು ಜಾರಿಗೆ ಬರುವುದರೊಂದಿಗೆ ನೈಸ್ ರಸ್ತೆಯಲ್ಲಿ ಪ್ರಯಾಣವು ದುಬಾರಿಯಾಗಲಿದೆ. ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ ಲಿಮಿಟೆಡ್ (ನೈಸ್) ಟೋಲ್ ದರವನ್ನು ಶೇಕಡಾ 11 ರಷ್ಟು ಹೆಚ್ಚಿಸಿದೆ. ಪರಿಷ್ಕೃತ ದರಗಳು ನಾಳೆಯಿಂದ ಜಾರಿಗೆ ಬರಲಿವೆ ಎಂದು ನೈಸ್ ಶುಕ್ರವಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.
ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ, ಕ್ಲೋವರ್ ಲೀಫ್ ಜಂಕ್ಷನ್, ಮೈಸೂರು ರಸ್ತೆ, ಮಾಗಡಿ ರಸ್ತೆ, ತುಮಕೂರು ರಸ್ತೆ ಮತ್ತು ಲಿಂಕ್ ರಸ್ತೆ ಮಾರ್ಗಗಳಲ್ಲಿ ನೈಸ್ ರಸ್ತೆಯನ್ನು ಆಗಾಗ್ಗೆ ಬಳಸುವ ಪ್ರಯಾಣಿಕರು ಶನಿವಾರದಿಂದ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ.
You Might Also Like
TAGGED:Nice road