HomeKarnatakaBIG NEWS: ಅವರು ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ; ಸಿ.ಟಿ.ರವಿ 'ಪಂಚೆ’...

BIG NEWS: ಅವರು ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ; ಸಿ.ಟಿ.ರವಿ ‘ಪಂಚೆ’ ಹೇಳಿಕೆಗೆ ಟಾಂಗ್ ನೀಡಿದ ಕೃಷಿ ಸಚಿವ

ಮೈಸೂರು: ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪಂಚೆ ಬಗ್ಗೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಸಿ.ಟಿ.ರವಿ ಮಾತಿಗೆ ತಿರುಗೇಟು ನೀಡಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ, ಅವರು ಮೊದಲು ತಮ್ಮ ಪಂಚೆ ಸರಿಪಡಿಸಿಕೊಳ್ಳಲಿ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಕೃಷಿ ಸಚಿವ, ಈ ರೀತಿ ಮಾತುಗಳನ್ನು ಆಡಿದ್ದಕ್ಕೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಿದ್ದು ಬಿಜೆಪಿಗೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಉತ್ತರವೇ ಅಂತಿಮ. ಏನೇನೋ ಮಾತನಾಡಿದ್ದಕ್ಕೆ ಬಿಜೆಪಿ 65 ಸ್ಥಾನಕ್ಕೆ ಕುಸಿದಿದೆ ಎಂದು ಟಾಂಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಏನು ಕಿತ್ತಾಡುತ್ತಿದ್ದಾರೆ ? ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನರು ಉತ್ತರ ಕೊಟ್ಟಿದ್ದಾರೆ. ನಮ್ಮ ಪಂಚೆ ಸರಿ ಮಾಡುವುದು ಬೇಡ. ಮೊದಲು ಬಿಜೆಪಿಯವರ ಪಂಚೆ ಸರಿ ಮಾಡಿಕೊಳ್ಳಲಿ. ಏನೇನೋ ಮಾತನಾಡಿ ಪ್ರಚಾರ ತೆಗೆದುಕೊಳ್ಳಲು ಹೋಗುತ್ತಾರೆ. ಬಿಜೆಪಿ, ಜೆಡಿಎಸ್ ನವರು ಪ್ರಚಾರ ತೆಗೆದುಕೊಳ್ಳಲು ನೋಡುತ್ತಿದ್ದಾರೆ ಎಂದು ಗುಡುಗಿದರು.

For Latest News Updates, Join Our Whatsapp Community🚩
RELATED ARTICLES

Most Popular