
ಬೆಳಗಾವಿ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಸುಭಾಷ್ ಬಡಾವಣೆಯ ಮನೆಯಲ್ಲಿ ಈ ಅವಘಡ ಸಂಭವಿಸಿದೆ. NWKSRTC ನೌಕರ ಮಂಜುನಾಥ್, ಪತ್ನಿ ಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದು, ಮಕ್ಕಳಾದ ವೈಷ್ಣವಿ (13), ಸಾಯಿಪ್ರಸಾದ್ (10) ಸಣ್ಣ ಪುಟ್ಟ ಗಾಯಗಳಾಗಿವೆ.
ಚಹಾ ಮಾಡಲೆಂದು ಲೈಟರ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.