
ಮಹಾರಾಷ್ಟ್ರದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬಕ್ಕೆ ದುಃಖವನ್ನ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುತ್ತೇವೆ, ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡುತ್ತೇವೆ. ಮಹಾರಾಷ್ಟ್ರ ಸರ್ಕಾರ ಕೂಡ ಪರಿಹಾರ ಘೋಷಿಸಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುತ್ತದೆ, ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಣೆ ಮಾಡಿದ್ದಾರೆ.
ಬಸ್ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 25 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಬಸ್ನ ಚಾಲಕ ಕೂಡ ಬದುಕುಳಿದಿದ್ದು, ಬಸ್ ನ ಟಯರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ನಂತರ ಬಸ್ ಗೆ ಬೆಂಕಿ ಹೊತ್ತಿಕೊಂಡು 25 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Deeply saddened by the devastating bus mishap in Buldhana, Maharashtra. My thoughts and prayers are with the families of those who lost their lives. May the injured recover soon. The local administration is providing all possible assistance to the affected: PM @narendramodi
— PMO India (@PMOIndia) July 1, 2023

