alex Certify ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಭಾಗವಹಿಸುವಿಕೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಡಾ.ಆರ್.ಸೆಲ್ವಮಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಭಾಗವಹಿಸುವಿಕೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಡಾ.ಆರ್.ಸೆಲ್ವಮಣಿ

ಶಿವಮೊಗ್ಗ : ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಭಾಗವಹಿಸುವಿಕೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.

ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಪ್ರೌಢಶಾಲಾ ಮುಖ್ಯಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳು ತಮ್ಮ ಮನಸ್ಸನ್ನು ಶೈಕ್ಷಣಿಕ ಚಟುವಟಿಕೆಗಳಿಂದ ದೂರ ಹೋಗದಂತೆ ಕೇಂದ್ರೀಕರಿಸಿ ಶಾಲಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಲು ಶಿಕ್ಷಕರು ಗಮನಹರಿಸುವಂತೆಯೇ ಅವರು ಮಕ್ಕಳಿಗೆ ದೊರೆಯಬೇಕಾದ ಸೌಲಭ್ಯಗಳು ಮತ್ತು ಅವರ ಅನಾನುಕೂಲತೆಗಳ ಬಗ್ಗೆಯೂ ಶಿಕ್ಷಕರು ಗಮನಹರಿಸುವ ಅಗತ್ಯವಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಆಗಾಗ್ಗೆ ಕೇಳಿಬರುವ ಬಾಲ್ಯವಿವಾಹ ನಿಯಂತ್ರಣವೂ ಶಿಕ್ಷಕರ ಹೊಣೆಗಾರಿಕೆಗಳಲ್ಲೊಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಬಹುತೇಕ ಘಟನಾವಳಿಗಳು ಶಿಕ್ಷಕರ ಕಣ್ಣಂಚಿನಲ್ಲಿ ಗೋಚರಿಸುವಂತದ್ದಾಗಿದೆ. ಬಾಲ್ಯವಿವಾಹದಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಪ್ರಕರಣಗಳ ಕುರಿತು ಸಕ್ಷಮ ಪ್ರಾಧಿಕಾರಕ್ಕೆ ವಿಷಯ ತಲುಪಿಸುವುದು, ನಿಯಂತ್ರಿಸುವಲ್ಲಿ ಕ್ರಮವಹಿಸುವುದು ಕೂಡ ಶಿಕ್ಷಕರ ಕರ್ತವ್ಯವಾಗಿದೆ ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಕ್ರೌರ್ಯ ಮತ್ತು ಲೈಂಗಿಕ ದೌರ್ಜನ್ಯಗಳು ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದು. ಇಂತಹ ವಿಷಯಗಳ ಕುರಿತು ಜನರಲ್ಲಿ ಅರಿವಿನ ಕೊರತೆ ಎದ್ದು ಕಾಣುತ್ತಿದೆ. ಈ ವಿಷಯಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕಾಗಿರುತ್ತದೆ. ಇದರಿಂದ ವಿಮುಖನಾಗುವುದು ನೈಜ ಶಿಕ್ಷಕನ ಲಕ್ಷಣವಲ್ಲ ಎಂದವರು ನುಡಿದರು.

ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ನಿರೀಕ್ಷೆಯಂತಿಲ್ಲ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಶಿಕ್ಷಕರು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ, ಶೇ.100ಫಲಿತಾಂಶ ತರುವಲ್ಲಿ ವಿಶೇಷ ಕಾಳಜಿ ವಹಿಸಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮಾತನಾಡಿ, ಸೀಮಿತ ಪ್ರದೇಶದಲ್ಲಿರುವ ಸರ್ಕಾರದ ಪ್ರಮುಖ ಘಟಕ ಶಾಲೆಗಳು. ಈ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿ ಶಿಕ್ಷಕರು ಸಾರ್ವಜನಿಕರೊಂದಿಗೆ ಸದಾ ಸಂಪರ್ಕ ಹೊಂದಿದ್ದು, ಸಾಮಾಜಿಕ ಪಿಡುಗಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಬೇಕೆಂದವರು ನುಡಿದರು.

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶಕ್ಕಾಗಿ ಸರ್ಕಾರದ ಎಲ್ಲಾ ಶಾಲೆಗಳ ಶಿಕ್ಷಕರು ವಿಶೇಷ ಗಮನಹರಿಸಿ, ಜಿಲ್ಲೆಯನ್ನು ರಾಜ್ಯದ ಮೇಲ್ಪಂಕ್ತಿಯ 5ಜಿಲ್ಲೆಗಳಲ್ಲಿ ಗುರುತಿಸುವಂತೆ ಮಾಡಬೇಕು. ಅದಕ್ಕಾಗಿ ಶಿಕ್ಷಕರು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುವಂತೆ ಸೂಚಿಸಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...