ಕಲಬುರಗಿ: ಕಾಲು ಜಾರಿ ಭೀಮಾ ನದಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 7ನೇ ತರಗತಿ ವಿದ್ಯಾರ್ಥಿ ರಾಮು ದೊಡ್ಡಮನಿ(12) ಹಾಗೂ ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿ ದೇವು ಹೊಸಮನಿ(17) ಮೃತಪಟ್ಟವರು ಎಂದು ಹೇಳಲಾಗಿದೆ.
ನದಿಯಲ್ಲಿ ನೀರು ಕುಡಿಯಲು ಹೋಗಿದ್ದಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಕೋನಹಿಪ್ಪರಗಿ ಬ್ರಿಡ್ಜ್ ಕಮ್ ಬ್ಯಾರೇಜ್ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.