HomeIndiaBIG NEWS: ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ; 'ಏಕರೂಪ ನಾಗರಿಕ ಸಂಹಿತೆ' ಮಸೂದೆ...

BIG NEWS: ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11ರವರೆಗೆ ನಡೆಯಲಿದ್ದು, ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಈ ಬಾರಿಯ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಮಂಡನೆ ಮಾಡುವ ಸಾಧ್ಯತೆ ಇದೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಸೇರಿದಂತೆ ಕೆಲವೊಂದು ಮಸೂದೆಗಳನ್ನು ಮಂಡಿಸಲು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷಗಳು, ಏಕರೂಪ ನಾಗರಿಕ ಸಂಹಿತೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳ ಕುರಿತು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನಿಸಲು ತಯಾರಿ ನಡೆಸಿವೆ.

For Latest News Updates, Join Our Whatsapp Community🚩
RELATED ARTICLES

Most Popular