ಮೈಸೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ 2.5 ಲಕ್ಷ ಹುದ್ದೆ ಖಾಲಿಯಿದ್ದು, ಅವುಗಳನ್ನು ಭರ್ತಿ ಮಾಡುವ ಕಾರ್ಯ ಆರಂಭವಾಗಿದೆ. ಅದೇ ರೀತಿ ಪೊಲೀಸ್ ಇಲಾಖೆಯಲ್ಲಿ 15,000 ಹುದ್ದೆ ಖಾಲಿ ಇದ್ದು, ಮೊದಲ ಹಂತದಲ್ಲಿ 4000 ಕಾನ್ಸ್ಟೇಬಲ್ ಮತ್ತು 400 ಇನ್ ಸಬ್ ಇನ್ಸ್ಪೆಕ್ಟರ್ ಹುದ್ದೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.