
ಜುಲೈ 6 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಮಂಡ್ಯ, ತುಮಕೂರು. ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಕೂಡ ಭಾರಿ ಮಳೆಯಾಗಲಿದ್ದು, ಜುಲೈ 3ರವರೆಗೆ ಯೆಲ್ಲೋ ಅಲರ್ಟ್ ಹಾಗೂ ಜುಲೈ 4 ಮತ್ತು 5ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಜುಲೈ ಮೊದಲನೆಯ ವಾರದಿಂದ ಮಳೆ ಅಬ್ಬರ ಶುರುವಾಗಲಿದೆ. ಆಗಸ್ಟ್ವರೆಗೂ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ.

