ಬೆಳಗಾವಿ : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ‘ಜುಲೈ 3 ಅಥವಾ 4ರಂದು ಈ ಬಗ್ಗೆ ನಾವು ಘೋಷಣೆ ಮಾಡುತ್ತೇವೆ. ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ ಎಂದರು. ಅರ್ಜಿ ಸ್ವೀಕಾರ ಜುಲೈ 14ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದರು.
ಗೃಹ ಲಕ್ಷ್ಮಿ ಜಾರಿಗೆ ಪ್ರತಿ ಜಿಲ್ಲೆಗೂ 50 ರಿಂದ 100 ಜನ ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗಿದ್ದು, ಅವರೇ ನಿಮ್ಮ ಊರಿಗೆ ಬಂದು ಅರ್ಜಿಗಳನ್ನು ಭರ್ತಿ ಮಾಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಯ ವೆಚ್ಚವನ್ನ ಸರ್ಕಾರವೇ ಭರಿಸಲಿದೆ. ಸೇವಾ ಕೇಂದ್ರಗಳಿಗೆ ಇಲಾಖೆಯಿಂದಲೇ ಅರ್ಜಿಗೆ 20 ರೂ. ನೀಡುತ್ತೇವೆ. ಅರ್ಜಿ ಸಲ್ಲಿಸುವ ವೇಳೆ ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು. ಅರ್ಜಿ ಸಲ್ಲಿಕೆ ವೇಳೆ ಯಾರೂ ಒಂದು ರೂಪಾಯಿಯನ್ನೂ ಕೊಡಬೇಡಿ. ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಲಾಸ್ಟ್ ಡೇಟ್ ಇಲ್ಲ, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ನಿರಂತರವಾಗಿ ಇರಲಿದೆ ಎಂದು ಹೇಳಿದರು. ಅರ್ಜಿ ಸಲ್ಲಿಕೆ ವೇಳೆ ಯಾರಿಗೂ ಕೂಡ 1 ರೂಪಾಯಿ ಕೂಡಬೇಡಿ ಅರ್ಜಿ ಸಲ್ಲಿಸುವ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.