ಬೆಂಗಳೂರು : ಆ.16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಗೃಹಲಕ್ಷ್ಮಿ ಯೋಜನೆಯಡಿ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಹಾಕುವ ಮಹತ್ವದ ಯೋಜನೆ ಆ 16 ರಂದು ಚಾಲನೆ ಸಿಗಲಿದೆ, ಆ.16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ, ನುಡಿದಂತೆ ನಡೆದ ಸರ್ಕಾರ ನಮ್ಮದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಶುರು
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ‘ಜುಲೈ 3 ಅಥವಾ 4ರಂದು ಈ ಬಗ್ಗೆ ನಾವು ಘೋಷಣೆ ಮಾಡುತ್ತೇವೆ. ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ ಎಂದರು. ಅರ್ಜಿ ಸ್ವೀಕಾರ ಜುಲೈ 14ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದರು.