HomeKarnatakaB.S Yediyurappa : ನನ್ನನ್ನು ಯಾರೂ ಟಾರ್ಗೆಟ್ ಮಾಡಿಲ್ಲ, ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಮತ...

B.S Yediyurappa : ನನ್ನನ್ನು ಯಾರೂ ಟಾರ್ಗೆಟ್ ಮಾಡಿಲ್ಲ, ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಮತ ಇಲ್ಲ : ಮಾಜಿ ಸಿಎಂ BSY

ನವದೆಹಲಿ : ನನ್ನನ್ನು ಯಾರೂ ಟಾರ್ಗೆಟ್ ಮಾಡಿಲ್ಲ, ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಮತ ಇಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ನವದೆಹಲಿಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ನನ್ನನ್ನು ಯಾರೂ ಕೂಡ ಟಾರ್ಗೆಟ್ ಮಾಡಿಲ್ಲ, ನನಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಸಿಕ್ಕಿದೆ. ಕೇಂದ್ರದ ನಾಯಕರು ನನ್ನನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚಿಸಲು ಹೈಕಮಾಂಡ್ ಬುಲಾವ್ ಮೇರೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಮುಹೂರ್ತ ನಿಗದಿಯಾಗಿದೆ.ವಿಪಕ್ಷ ನಾಯಕನ ಆಯ್ಕೆ, ರಾಜ್ಯಾಧ್ಯಕ್ಷರ ನೇಮಕ ಸೇರಿದಂತೆ ಎಲ್ಲಾ ವಿಚಾರಗಳನ್ನು ವರಿಷ್ಠರ ಜೊತೆ ಚರ್ಚಿಸುತ್ತೇನೆ. ರಾತ್ರಿ 8 ಗಂಟೆಗೆ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ ಎಂದರು.ಇದೇ ವೇಳೆ ಕೇಂದ್ರ ಸಂಪುಟದಲ್ಲಿ ಸಂಸದ ಬಿ.ವೈ.ರಾಘವೇಂದ್ರಗೆ ಸ್ಥಾನ ಸಿಗುವ ಸಾಧ್ಯತೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವ ಸಂಪುಟದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು. ಪಕ್ಷದ ವಿರುದ್ಧ ರೇಣುಕಾಚಾರ್ಯ ಹೇಳಿಕೆಗೆ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಈಗಾಗಲೇ ನವದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನಿವಾಸದಲ್ಲಿ ತಂಗಿರುವ ಮಾಜಿ ಸಿಎಂ ಯಡಿಯೂರಪ್ಪನವರು, ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ.

ಇಂದು ರಾತ್ರಿ 8 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಷ್ಟ್ರ‍ಾಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಲಿದ್ದಾರೆ. ಈ ವೇಳೆ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚೆ ನಡೆಯಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular