HomeKarnatakaBIG NEWS: ಶೆಟ್ಟರ್ ಸೇರಿದಂತೆ ಮೂವರಿಂದ ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ

BIG NEWS: ಶೆಟ್ಟರ್ ಸೇರಿದಂತೆ ಮೂವರಿಂದ ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಮೂವರಿಗೂ ಪ್ರಮಾಣವಚನ ಬೋಧಿಸಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಕಾಂಗ್ರೆಸ್ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಪರಾಭವಗೊಂಡಿದ್ದರೂ ಬಳಿಕ ವಿಧಾನ ಪರಿಷತ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಶೆಟ್ಟರ್ ಕಾಂಗ್ರೆಸ್ ಪಕ್ಷದಿಂದ ತಮ್ಮ ರಾಜಕೀಯದ ಎರಡನೇ ಆರಂಭಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular