ಬೆಂಗಳೂರು: ಮುಂಗಾರು ಮಾರುತಗಳು ಇಂದಿನಿಂದ ಚುರುಕಾಗುವ ಸಾಧ್ಯತೆಯಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುವ ಸಂಭವ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 115 ಮಿ.ಮೀ. ನಿಂದ 204 ಮಿ.ಮೀ.ವರೆಗೆ ಮಳೆಯಾಗುವ ಸಂಭವ ಇದೆ. ಆರೆಂಜ್ ಅಲರ್ಟ್ ನೀಡಲಾಗಿದೆ.
ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 4 ರಿಂದ ದಕ್ಷಿಣ ಒಳನಾಡು ಮತ್ತು ಉತ್ತರವಳ ನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ತುಮಕೂರು, ಮೈಸೂರು, ಹಾಸನ, ಹಾವೇರಿ, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.