HomeKarnataka500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಹೊಂದಿದ್ದ ತಹಶೀಲ್ದಾರ್ ಸಿರಿವಾರ ತಾಲೂಕಿಗೆ ನಿಯೋಜನೆ

500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಹೊಂದಿದ್ದ ತಹಶೀಲ್ದಾರ್ ಸಿರಿವಾರ ತಾಲೂಕಿಗೆ ನಿಯೋಜನೆ

ರಾಯಚೂರು: 500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಸಂಪಾದಿಸಿದ ಆರೋಪ ಹೊತ್ತಿರುವ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಗೆ ಅಜಿತ್ ಕುಮಾರ್ ರೈ ಅವರನ್ನು ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಗ್ರೇಡ್ -2 ತಹಶೀಲ್ದಾರ್ ಹುದ್ದೆಗೆ ಸರ್ಕಾರ ನೇಮಕ ಮಾಡಿದ್ದು, ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಅಜಿತ್ ರೈ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. ಸಿರವಾರದಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಪರಶುರಾಮ 500 ರೂಪಾಯಿ ಲಂಚ ಸ್ವೀಕಾರ ಆರೋಪದಡಿ ಲೋಕಾಯುಕ್ತ ದಾಳಿಗೆ ಸಿಲುಕಿ ಸೇವೆಯಿಂದ ಅಮಾನತುಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಸ್ಥಾನಕ್ಕೆ ಅಜಿತ್ ರೈ ಅವರಿಗೆ ಹಿಂಬಡ್ತಿ ನೀಡಿ ಸರ್ಕಾರ ವರ್ಗಾವಣೆ ಮಾಡಿದೆ. ಹಿಂದುಳಿದ ರಾಯಚೂರು ಜಿಲ್ಲೆಯ ಸಿರಿವಾರಕ್ಕೆ ಭ್ರಷ್ಟಾಚಾರ ಆರೋಪ ಹೊತ್ತಿರುವ ಅಜಿತ್ ರೈ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ. ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular