HomeKarnatakaBIG NEWS: ಗ್ಯಾರಂಟಿ ಯೋಜನೆಗೆ ಒತ್ತಾಯಿಸಿ ಸದನದ ಒಳಗೂ, ಹೊರಗೂ ಬಿಜೆಪಿ ಪ್ರತಿಭಟನೆ

BIG NEWS: ಗ್ಯಾರಂಟಿ ಯೋಜನೆಗೆ ಒತ್ತಾಯಿಸಿ ಸದನದ ಒಳಗೂ, ಹೊರಗೂ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಒತ್ತಾಯಿಸಿ ಇಂದು ಬಿಜೆಪಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದೆ.

ವಿಧಾನಸೌಧದ ಒಳಗಡೆ ಹಾಗೂ ಹೊರಗಡೆ ಏಕಕಾಲದಲ್ಲಿ ಎರಡು ಕಡೆ ಇಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬೆಳಿಗ್ಗೆ 10:30ಕ್ಕೆ ಪ್ರತಿಭಟನೆ ಆರಂಭವಾಗಲಿದ್ದು, ಸಂಜೆವರೆಗೂ ಧರಣಿ ಕೂರಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧರಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಡಿ.ಬಿ. ಸದಾನಂದಗೌಡ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಇನ್ನೊಂದೊಡೆ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿಯೂ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಸದನದಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular