ತೋಟದಲ್ಲಿ ಪತ್ತೆಯಾದ ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಮರಂಡೂದ ಗ್ರಾಮದಲ್ಲಿ ನಡೆದಿದೆ.
ಮೇರಿಯಂಡ ಅಪ್ಪಣ್ಣ ಎಂಬವರ ತೋಟದಲ್ಲಿ ಭಾನುವಾರದಂದು ಈ ಕಾಳಿಂಗ ಸರ್ಪ ಕಂಡು ಬಂದಿದ್ದು, ಇದನ್ನು ನೋಡಿದ ಕೆಲಸಗಾರರು ಭಯಗೊಂಡು ಅಪ್ಪಣ್ಣನವರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಉರಗತಜ್ಞ ಪೊನ್ನೀರ ಸ್ನೇಕ್ ಗಗನ್ ಅವರನ್ನು ಸಂಪರ್ಕಿಸಲಾಗಿದ್ದು, ಸ್ಥಳಕ್ಕೆ ಧಾವಿಸಿದ ಅವರು ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸೆರೆಹಿಡಿದು ಪೆರುಂಬಾಡಿಯ ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.