ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ಇಂದು (ಜುಲೈ 4) ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉಳಿದೆಡೆ ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶಿಲ್ದಾರ್ ಗಳು ರಜೆ ಘೋಷಿಸಲು ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಜುಲೈ 3 ರಿಂದ ಜುಲೈ 7 ರವರೆಗೆ ಕರ್ನಾಟಕ ಕರಾವಳಿಯಲ್ಲಿ 55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.