HomeKarnatakaBIG NEWS: ಉತ್ತರ ಕನ್ನಡದಲ್ಲಿ ಮುಂದುವರೆದ ವರುಣಾರ್ಭಟ; ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ

BIG NEWS: ಉತ್ತರ ಕನ್ನಡದಲ್ಲಿ ಮುಂದುವರೆದ ವರುಣಾರ್ಭಟ; ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.

ಬಿರುಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ಮನೆಯ ಮೇಲೆ ಉರುಳಿ ಬಿದ್ದಿರುವ ಘಟನೆ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರಭಾತ ನಗರದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕಾಶ್ ಮೇಸ್ತಾ ಎಂಬುವವರಿಗೆ ಸೇರಿದ ಮನೆಯ ಮೇಲೆ ಮರ ಬಿದ್ದಿದ್ದು, ಮನೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular