ಬೆಂಗಳೂರು : ಮೊದಲ ಕ್ಯಾಬಿನೆಟ್ ನಲ್ಲೇ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿ ಮಾಡಬೇಕಿತ್ತು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ( K.S Eshwarappa) ವಾಗ್ಧಾಳಿ ನಡೆಸಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಇಂದು ನಡೆಯತ್ತಿರುವ ಪ್ರತಿಭಟನೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ‘ಯೋಜನೆಗಳನ್ನು ಜಾರಿ ಮಾಡುವುದಾಗಿ ಹೇಳಿ ಸರ್ಕಾರ ಜನರಿಗೆ ಮೋಸ ಮಾಡಿದೆ. ಕೇವಲ ಒಂದು ಯೋಜನೆ ಮಾತ್ರ ಜಾರಿಗೆ ತಂದಿದೆ. ಮೊದಲ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿದ್ದ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ಧಾಳಿ ನಡೆಸಿದ್ದಾರೆ.
ಕೊಟ್ಟ ಮಾತಿನಂತೆ ಮೊದಲ ಸಂಪುಟದಲ್ಲೇ ಈಡೇರಿಸಬೇಕಿತ್ತು, ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.